ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಉಗ್ರ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುತ್ತಿದ್ದಂತೆ ಗಾಯಕ ಇದೀಗ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.
ಬೆಂಗಳೂರು: ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಉಗ್ರ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುತ್ತಿದ್ದಂತೆ ಗಾಯಕ ಇದೀಗ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.
ಸೋನು ನಿಗಮ್ ವಿಡಿಯೊದಲ್ಲಿ ಕನ್ನಡಿಗರ ಕ್ಷಮೆ ಕೇಳಬಹುದು ಎಂದುಕೊಂಡಿದ್ದೆವು. ಆದರೆ ವಿಡಿಯೊದಲ್ಲಿ ಕ್ಷಮಾಪಣೆ ಕೇಳಲಿಲ್ಲ. ಹೀಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾರೂ ಸೋನು ನಿಗಮ್ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್ ನೈಟ್ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಬಾರದು ಎಂದು ನಿರ್ಣಯ ತೆಗೆದುಕೊಂಡಿತ್ತು.
ಇದರ ಬೆನ್ನಲ್ಲೇ ಇದೀಗ ಸೋನು ನಿಗಮ್ ಎಚ್ಚೆತ್ತುಗೊಂಡಿದ್ದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ. ನಾನು ಕನ್ನಡಿಗರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಸೋನು ನಿಗಮ್ ಬರೆದುಕೊಂಡಿದ್ದಾರೆ.
Sonu Nigam Instagram Page :
Post a Comment