ಇಸ್ರೇಲ್ ನಲ್ಲಿ ಮತ್ತೆ Houthi ಉಗ್ರರ ಅಟ್ಟಹಾಸ: ವಿಮಾನ ನಿಲ್ದಾಣದಲ್ಲಿ Missile Strike; ಮೇ 6ರ ವರೆಗೆ Air India ವಿಮಾನಯಾನ ಬಂದ್.

 ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.



ನವದೆಹಲಿ: ಇಸ್ರೇಲ್ ನಲ್ಲಿ ಮತ್ತೆ ಹೌತಿ ಬಂಡುಕೋರರ ಅಟ್ಟಹಾಸ ಮೆರೆದಿದ್ದು ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ಪರಿಣಾಮ ಭಾರತ ಮೇ 6ರ ವರೆಗೆ Air India ವಿಮಾನಯಾನ ಬಂದ್ ಮಾಡಿದೆ.

ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿಂದು ಬೆಳಗ್ಗೆ ಹೌತಿ ಬಂಡುಕೋರರು ಕ್ಷಿಪಣಿ ದಾಳಿ (Missile Attack) ನಡೆಸಿದೆ. ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕ್ಷಿಪಣಿ ದಾಳಿಯು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ನಂತರ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಬೆನ್ ಗುರಿಯನ್ ವಿಮಾನ ನಿಲ್ದಾಣವು "ಇನ್ನು ಮುಂದೆ ವಿಮಾನ ಪ್ರಯಾಣಕ್ಕೆ ಸುರಕ್ಷಿತವಲ್ಲ" ಎಂದು ಹೇಳಿದರು. ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬಲವಾದ ಪ್ರತಿಕ್ರಿಯೆಯನ್ನು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ "ನಮಗೆ ಯಾರಾದರೂ ಹೊಡೆದರೆ, ನಾವು ಅವರಿಗೆ ಏಳು ಪಟ್ಟು ಹೆಚ್ಚು ಹೊಡೆಯುತ್ತೇವೆ" ಎಂದು ಅವರು ಎಚ್ಚರಿಕೆ ನೀಡಿದರು.

ಇದೇ ವೇಳೆ ಕ್ಷಿಪಣಿಗಳು ಮತ್ತು ಡ್ರೋನ್ ದಾಳಿಗಳಿಂದ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡಿರುವ ಇರಾನ್ ಬೆಂಬಲಿತ ಹೌತಿ ಬಂಡುಕೋರರು, ನಾವು ಪ್ಯಾಲೆಸ್ಟೀನಿಯನ್ನರ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.


Previous Post Next Post