'Operation Sindoor Still Ongoing': 'ಸಿಂಧೂರ' ಇನ್ನೂ ಮುಗಿದಿಲ್ಲ..' ಕದನ ವಿರಾಮ ಘೋಷಣೆ ಬೆನ್ನಲ್ಲೇ IAF ಮಹತ್ವದ ಹೇಳಿಕೆ!

ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ಮುಗಿದಿಲ್ಲ. ಅದು ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ.


ನವದೆಹಲಿ: ಪಹಲ್ಗಾಮ್ ಉಗ್ರದಾಳಿ ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿದ್ದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಮೆತ್ತಗಾಗಿದೆ ಎನ್ನುವಾಗಲೇ ಭಾರತೀಯ ವಾಯುಸೇನೆ Operation Sindoor ಕುರಿತು ಮಹತ್ವದ ಹೇಳಿಕೆ ನೀಡಿದೆ.

ಹೌದು.. ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರPahalgam terror attackಣೆ ಮುಗಿದಿಲ್ಲ. ಅದು ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ಬಂದಿದೆ.

Previous Post Next Post