ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ (Mohamed Sameer) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಮೀರ್ ಎಂಡಿ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ಸಮೀರ್ ಎಂಡಿ ಪೊಲೀಸರ ಮುಂದೆವಿಚಾರಣೆಗೆ ಹಾಜರಾಗಿದ್ದಾನೆ.
ಮೂವರು ವಕೀಲರ ಜೊತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಬೆಳ್ತಗಂಡಿ ಪೊಲೀಸರು ಸಮೀರ್ ಎಂಡಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ಕೋರ್ಟ್ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ಇಂದು ಕೋರ್ಟ್ ನೀಡಿದ ಗಡುಗು ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.