Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿತ್ತು. ಪಾಕ್ ನೀಡಿದ 128 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿ ಭಾರತ 3 ವಿಕೆಟ್ ನಷ್ಟಕ್ಕೆ 131 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಅಭಿಷೇಕ್ ಶರ್ಮಾ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ ತಿಲಕ್ ವರ್ಮಾ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಅಜೇಯ 47 ಹಾಗೂ ಶಿವಂ ದುಬೆ ಅಜೇಯ 10 ರನ್ ಬಾರಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು. ಅಂತಿಮವಾಗಿ ಭಾರತ 15.5 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 131 ರನ್ ಬಾರಿಸಿತು. ಪಾಕಿಸ್ತಾನ ಪರ ಸೈಮ್ ಆಯೂಬ್ 3 ವಿಕೆಟ್ ಪಡೆದರು.

Previous Post Next Post