Date : 13/09/2025 Published by : Sandeep Kumar T
ಹಾಸನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ನೀಡಿದ ಪರಿಹಾರವನ್ನು 10 ಲಕ್ಷಕ್ಕೆ ಏರಿಸಬೇಕು ಎಂಬ ಬಿಜೆಪಿಯವರ ಒತ್ತಾಯದ ಕುರಿತು ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ.

ಮೈಸೂರು : ಸರ್ಕಾರ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡುತ್ತದೆ ಆದರೆ ಅದು ಸಾವಿಗೆ ಸಮಾನವಾಗಿರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಹಾಸನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ನೀಡಿದ ಪರಿಹಾರವನ್ನು 10 ಲಕ್ಷಕ್ಕೆ ಏರಿಸಬೇಕು ಎಂಬ ಬಿಜೆಪಿಯವರ ಒತ್ತಾಯದ ಕುರಿತು ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳಲು ರೂ.5 ಲಕ್ಷ ಪರಿಹಾರ ನೀಡಿದ್ದೇವೆ. ಆದರೆ ಸಾವಿಗೆ ಸಮಾನವಾಗಿ ಪರಿಹಾರ ಕೊಡಿ ಅಂತಾ ಒತ್ತಾಯಿಸುವ ಪ್ರಯತ್ನ ಮಾಡಬಾರದು ಎಂದರು.
ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಸಿಎಂ, ಹಾಸನ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
------------------------------------------------------------------------------------------------------------